ಅಕ್ವೇರಿಯಂ (ಮತ್ಸ್ಯಾಲಯ)

ಪಶ್ಚಿಮ ಘಟ್ಟದ ಅಪರೂಪದ ಮೀನುತಳಿಗಳ ಸಂರಕ್ಷಣೆ ಮತ್ತು ಸಂತಾನೋತ್ಪತ್ತಿ ಯೋಜನೆ: ಪಿಲಿಕುಳದಲ್ಲಿ ಪಶ್ಚಿಮ ಘಟ್ಟದ ಅಪರೂಪದ ಮೀನು ತಳಿಗಳ ಸಂರಕ್ಷಣೆ ಮತ್ತು ಸಂತಾನೋತ್ಪತ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪಶ್ಚಿಮ ಘಟ್ಟದ ಅಳಿವಿನ ಅಂಚಿನಲ್ಲಿರುವ ಮತ್ಸ್ಯ ಪ್ರಬೇಧಗಳ ಸಂತಾನೋತ್ಪತ್ತಿ ಮತ್ತು ಅಕ್ವೇರಿಯಂ ಸ್ಥಾಪನೆ ಶೀರ್ಷಿಕೆಯಡಿಯಲ್ಲಿ ರೂ. 98.00 ಲಕ್ಷದ ಅನುದಾನದಲ್ಲಿ ಅಕ್ವೇರಿಯಂನ್ನು ಸ್ಥಾಪಿಸಿ ಸುಮಾರು 22 ಜಾತಿಯ ಮೀನುಗಳನ್ನು ಸಾಕಿ ಸಾರ್ವಜನಿಕರಿಗೆ ಪ್ರದರ್ಶನಕ್ಕೆ ಇಡಲಾಗಿದೆ. ಇದರಲ್ಲಿ ಅಪರೂಪದ ಮೀನುಗಳಲ್ಲದೆ ಸಂತಾನ ಕ್ಷೀಣಿಸುತ್ತಿರುವ ಮೀನುಗಳನ್ನು ಸಂಗ್ರಹಿಸಿ ಅವುಗಳ ಸಂತಾನೋತ್ಪತ್ತಿಯನ್ನು ಹೆಚ್ಚಿಸಲು ಶ್ರಮಿಸಲಾಗುತ್ತಿದೆ. ವಿವಿಧ ಬಗೆಯ ಆಕರ್ಷಕ ಮೀನುಗಳನ್ನು ಸಂದರ್ಶಕರಿಗೆ ವೀಕ್ಷಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಒಳನಾಡು ಮೀನುಗಳನ್ನು ಉತ್ಪಾದಿಸಿ ಬಳಕೆಯನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಪ್ರತೀ ವರ್ಷ ನಡೆಸಲಾಗುತ್ತದೆ. ವಿನಾಶದ ಅಂಚಿನಲ್ಲಿರುವ ಕಿಜಾನ್, ಮಲಬಾರ್ ಡೈನೊ, ಚಂದ್ರಡಿಕೆ ಮುಂತಾದ ಇತರೆ ಮೀನುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಂತಾನೋತ್ಪತ್ತಿ ಮಾಡಿ ಅವುಗಳ ಮರಿಗಳನ್ನು ಪಶ್ಚಿಮ ಘಟ್ಟದ ಮೂಲ ಆವಾಸ ಸ್ಥಾನಕ್ಕೆ ಬಿಡಲಾಗುತ್ತದೆ. 
×
ABOUT DULT ORGANISATIONAL STRUCTURE PROJECTS